ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಸಭಾಂಗಣದಲ್ಲಿವಿಶ್ವ ಬಂಟರ ಸಮ್ಮಿಲನ-2023 ಆಮಂತ್ರಣ ಪತ್ರಿಕೆ ಬಿಡುಗಡೆ
ಮoಗಳೂರು:ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.) ಮoಗಳೂರು ಇದರ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ಸಮರ್ಥ ಸಾರಥ್ಯದಲ್ಲಿ *ವಿಶ್ವ ಬಂಟರ ಸಮ್ಮಿಲನ-2023* ರ ಪ್ರಯುಕ್ತ ಉಡುಪಿ ಅಜ್ಜರಕಾಡು ಮೈದಾನದಲ್ಲಿ 28.10.2023ರಂದು ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ "ವಿಶ್ವ ಬಂಟರ ಕ್ರೀಡಾಕೂಟ"* ಹಾಗೂ 29.10.2023 ರಂದು ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ "ವಿಶ್ವ ಬಂಟರ ಸಾಂಸ್ಕೃತಿಕ ವೈಭವ" ಕಾರ್ಯಕ್ರಮದ ಕರಪತ್ರವನ್ನು ದಿನಾಂಕ 22/09/2023ರಂದು ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಸಭಾಂಗಣದಲ್ಲಿ, ಶ್ರೀದೇವಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಡಾ. ಎ.ಸದಾನಂದ ಶೆಟ್ಟಿಯವರಿಂದ ಅನಾವರಣಗೊಳಿಸಲಾಯಿತು.
ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರು ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ,ಜೊತೆ ಕಾರ್ಯದರ್ಶಿ ಹಾಗೂ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಚಂದ್ರಹಾಸ್ ಡಿ ಶೆಟ್ಟಿ, ರಾಜ್ ಗೋಪಾಲ್ ರೈ, ಸುರೇಶ್ಚಂದ್ರ ಶೆಟ್ಟಿ. ದೇವಿಚರಣ್ ಶೆಟ್ಟಿ, ಭಾಸ್ಕರ್ ರೈ ಕುಕ್ಕುವಳ್ಳಿ, ವಿಜಯಲಕ್ಷ್ಮಿ ಬಿ. ಶೆಟ್ಟಿ, ಟ್ರಸ್ಟ್ ನ ಪದಾಧಿಕಾರಿಗಳು,ಮಹಿಳಾ ವಿಭಾಗದ ಸದಸ್ಯರು ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
.jpeg)
.jpeg)
.jpeg)
.jpeg)
.jpeg)
.jpeg)
.jpeg)
.jpeg)
.jpeg)
.jpeg)
.jpeg)
Post a Comment