ಗಾಂಧಿ ಜಯಂತಿ: ಅ.2 ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ
ಗಾಂಧಿ ಜಯಂತಿ: ಅ.2 ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ
ಬೆಂಗಳೂರು, ಅ.01: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹುಟ್ಟುಹಬ್ಬ ಹಿನ್ನೆಲೆ ಅಕ್ಟೋಬರ್ 2 ರಂದು ದೇಶದಲ್ಲಿ ಗಾಂಧಿ ಜಯಂತಿ (Gandhi Jayanti) ಆಚರಿಸಲಾಗುತ್ತೆ. ಈ ವಿಶೇಷ ದಿನದಂದು ನಗರದಲ್ಲಿ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ಬಿಬಿಎಂಪಿ (BBMP) ನಿಷೇಧಿಸಿದೆ. ಬಿಬಿಎಂಪಿಯ ಪ್ರಾಣಿ ಸಲಹಾ ವಿಭಾಗವು ಈ ಕುರಿತು ಆದೇಶ ಹೊರಡಿಸಿದೆ (Meat Sale Ban).
‘ದಿನಾಂಕ 02-10-2023 ಸೋಮವಾರ ಗಾಂಧಿ ಜಯಂತಿ ಪ್ರಯುಕ್ತ ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ’ ಎಂದು ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಉದ್ದಿಮೆ ನಡೆಸುತ್ತಿರುವ ಉದ್ದಿಮೆದಾರರಿಗೆ ಮಾಂಸ ಮಾರಾಟ ಮಾಡದಂತೆ ಇಲಾಖೆ ಸೂಚನೆ ನೀಡಿದ್ದು, ತಪ್ಪಿದಲ್ಲಿ ಪಾಲಿಕೆ ಕಾಯ್ದೆ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಇನ್ನು ಮತ್ತೊಂದೆಡೆ ಸೋಮವಾರ ಬಿಬಿಎಂಪಿ ವ್ಯಾಪ್ತಿಯಲ್ಲಿ ಯಾವುದೇ ಮಾಂಸ ಮಾರಾಟ ಇರಲ್ಲ ಎಂದು ಪಾಲಿಕೆ ಪಶುಸಂಗೋಪನಾ ಇಲಾಖೆ ಜಂಟಿ-ನಿರ್ದೇಶಕರು ಮಾಹಿತಿ ನೀಡಿದ್ದಾರೆ.
Post a Comment