ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ
ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ,ಕನ್ನಡ ಪರ ಸಂಘಟನೆಗಳು ಇಂದು ರಾಜ್ಯ ಬಂದ್ ಗೆ ಕರೆ ನೀಡಿದ್ದು, ವಿವಿಧ ಜಿಲ್ಲೆಗಳಲ್ಲಿ ಜನ ಜೀವನ ಭಾದಿತವಾಗಿದೆ.ಆದರೆ ಕರ್ನಾಟಕ ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉಡುಪಿ ಹಾಗೂ ಮಂಗಳೂರಿನಲ್ಲಿ ಖಾಸಗಿ ಬಸ್ ಸಂಚಾರ ಹಾಗೂ ಹೋಟೆಲ್ ಉದ್ಯಮಗಳು ಭಾಗಿಯಾಗಿಲ್ಲ. ಬಂದ್ ನಿಂದ ಜನ ಸಾಮಾನ್ಯರು ತೊಂದರೆಗೆ ಒಳಗಾಗುತ್ತಾರೆ,
ಆದ್ದರಿಂದ ಕಾವೇರಿ ವಿಚಾರಕ್ಕೆ ನಮ್ಮ ನೈತಿಕ ಬೆಂಬಲವಿದೆ ಎಂದು ಖಾಸಗಿ ಬಸ್ ಮಾಲೀಕರ ಸಂಘಟನೆ ಹಾಗೂ ಹೋಟೆಲ್ ಉದ್ಯಮಿಗಳ ಒಕ್ಕೂಟ ತಿಳಿಸಿದೆ.
Post a Comment