ಏಕಾಏಕಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ರೈಲು
ರೈಲೊಂದು ತಡರಾತ್ರಿ ಟ್ರ್ಯಾಕ್ ಬಿಟ್ಟು ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಘಟನೆ ಉತ್ತರ ಪ್ರದೇಶದ ಮಥುರಾ ರೈಲು ನಿಲ್ದಾಣದಲ್ಲಿ ನಡೆದಿದೆ. ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್ ರೈಲೊಂದು ಏಕಾಏಕಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ದೆ. ರೈಲು ಶಕುರ್ ಬಸ್ತಿಯಿಂದ ಮಂಗಳವಾರ ರಾತ್ರಿ 10:49ಕ್ಕೆ ಮಥುರಾ ನಿಲ್ದಾಣಕ್ಕೆ ಬಂದಿದ್ದು, ಎಲ್ಲಾ ಪ್ರಯಾಣಿಕರು ರೈಲಿನಿಂದ ಇಳಿದ ಕೆಲವೇ ಕ್ಷಣಗಳಲ್ಲಿ ಇದ್ದಕ್ಕಿದ್ದಂತೆ ರೈಲು ಪ್ಲಾಟ್‌ಫಾರ್ಮ್‌ಗೆ ನುಗ್ಗಿದೆ.
ಈ ವೇಳೆ ತಕ್ಷಣ ಪ್ರಯಾಣಿಕರು ರೈಲಿನಿಂದ ಇಳಿದಿದ್ದರಿಂದ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಇದೇ ವೇಳೆ ಮಥುರಾ ಜಂಕ್ಷನ್ ರೈಲು ನಿಲ್ದಾಣದಲ್ಲಿ ಸ್ಥಳೀಯ ರೈಲು ಪ್ಲಾಟ್‌ಫಾರ್ಮ್‌ಗೆ ಹತ್ತಿದ ಪರಿಣಾಮ ಝಾನ್ಸಿ ಮೂಲದ ಉಷಾದೇವಿ (39) ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಗಿದೆ.


Post a Comment