ಡಿ ಸಿ ಎಂ ಡಿಕೆಶಿ ಭೇಟಿಯಾದ ಕಾಂಗ್ರೆಸ್ ನ ಹಿರಿಯ ಮುಖಂಡ ಬಿ ಕೆ ಹರಿಪ್ರಸಾದ್
ಡಿ ಸಿ ಎಂ ಡಿಕೆಶಿ ಭೇಟಿಯಾದ ಕಾಂಗ್ರೆಸ್ ನ ಹಿರಿಯ ಮುಖಂಡ ಬಿ ಕೆ ಹರಿಪ್ರಸಾದ್
ಕಾಂಗ್ರೆಸ್ ನ ಹಿರಿಯ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಅವರು ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿ, ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು. ಈ ಕಾರಣಕ್ಕಾಗಿ ಅವರಿಗೆ ಎಐಸಿಸಿ ಶಿಸ್ತು ಸಮಿತಿ ನೋಟಿಸ್ ನೀಡಿತ್ತು. ನೋಟಿಸ್ ಗೆ ಬಿ.ಕೆ ಹರಿಪ್ರಸಾದ್ ಉತ್ತರ ನೀಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಅವರು ಕೆ ಎಚ್ ಮುನಿಯಪ್ಪ ಅವರೊಂದಿಗೆ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದ್ದ ಈಡಿಗ, ಬಿಲ್ಲವ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಬಿ.ಕೆ ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು.
ಸಚಿವ ಸ್ಥಾನ ಕೈತಪ್ಪಲು ಸಿದ್ದರಾಮಯ್ಯ ಅವರೇ ಪರೋಕ್ಷ ಕಾರಣ ಎಂಬ ಅರ್ಥದಲ್ಲಿ ಅಸಮಾಧಾನ ಹೊರಹಾಕಿ, ದೇವರಾಜ ಅರಸು ಅವರ ಕಾರಿನಲ್ಲಿ ಕುಳಿತ ತಕ್ಷಣ ಅರಸು ಆಗಲ್ಲ ಎಂದೂ ಟಾಂಗ್ ನೀಡಿದ್ದರು.
ಬಿ.ಕೆ ಹರಿಪ್ರಸಾದ್ ಹೇಳಿಕೆ ಚರ್ಚೆಗೆ ಗ್ರಾಸವಾಗಿತ್ತು. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರು ಹರಿಪ್ರಸಾದ್ ವಿರುದ್ಧ ಹೈಕಮಾಂಡ್ ಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಎಐಸಿಸಿ ಶಿಸ್ತು ಸಮಿತಿ ಬಿ.ಕೆ ಹರಿ ಪ್ರಸಾದ್ ಅವರಿಗೆ ನೋಟಿಸ್ ನೀಡಿತ್ತು. ಹತ್ತು ದಿನಗಳ ಒಳಗಾಗಿ ಉತ್ತರ ನೀಡುವಂತೆಯೂ ಸೂಚಿಸಿತ್ತು.
ಎಐಸಿಸಿ ಶಿಸ್ತು ಸಮಿತಿ ನೋಟಿಸ್ ಗೆ ಹರಿಪ್ರಸಾದ್ ಈಗಾಗಲೇ ಉತ್ತರ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.


.jpeg)
.jpeg)
.jpeg)
.jpeg)
.jpeg)
Post a Comment