ರಾಜಕೀಯ ಒಲವು ಭಯೋತ್ಪಾದನೆಗೆ ಪ್ರತಿಕ್ರಿಯೆಗಳನ್ನು ನಿರ್ಧರಿಸುತ್ತದೆ…’ : UNGA ನಲ್ಲಿ ಕೆನಡಾದ ಮೇಲೆ ಕೆಂಡ ಕಾರಿದ ಕೇಂದ್ರ ಸಚಿವ ಜೈಶಂಕರ್ .
ರಾಜಕೀಯ ಒಲವು ಭಯೋತ್ಪಾದನೆಗೆ ಪ್ರತಿಕ್ರಿಯೆಗಳನ್ನು ನಿರ್ಧರಿಸುತ್ತದೆ…’
: UNGA ನಲ್ಲಿ ಕೆನಡಾದ ಮೇಲೆ ಕೆಂಡ ಕಾರಿದ ಕೇಂದ್ರ ಸಚಿವ ಜೈಶಂಕರ್ .
ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಸಂಬಂಧಿಸಿದಂತೆ ಭಾರತ ದೇಶದೊಂದಿಗೆ ವಾಗ್ದಾಳಿ ನಡೆಸುತ್ತಿರುವ ನಡುವೆಯೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುಎನ್‌ಜಿಎ) ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಕೆನಡಾ ವಿರುದ್ಧ ಮುಸುಕಿನ ದಾಳಿ ನಡೆಸಿದ್ದು, "ರಾಜಕೀಯ ಒಲವು ಭಯೋತ್ಪಾದನೆ, ಉಗ್ರವಾದ ಮತ್ತು ಹಿಂಸಾಚಾರಕ್ಕೆ ಪ್ರತಿಕ್ರಿಯೆಗಳನ್ನು ನಿರ್ಧರಿಸುತ್ತದೆ" ಎಂದು ಹೇಳಿದ್ದಾರೆ.
ಜೂನ್‌ನಲ್ಲಿ ನಡೆದ ಖಲಿಸ್ತಾನಿ ಪ್ರತ್ಯೇಕತಾವಾದಿಯ ಹತ್ಯೆಯಲ್ಲಿ ಭಾರತೀಯ ಏಜೆಂಟರ "ಸಂಭಾವ್ಯ" ಒಳಗೊಳ್ಳುವಿಕೆಯ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪಗಳನ್ನು ಅನುಸರಿಸಿ ಜೈಶಂಕರ್ ಕೆನಡಾದ ಮೇಲೆ ಕಿಡಿಕಾರಿದ್ದಾರೆ.






Post a Comment