ಮಹಾರಾಷ್ಟ್ರದಲ್ಲಿ ಮಿನಿ ಬಸ್ ಕಂಟೈನರ್​ಗೆ ಡಿಕ್ಕಿ ಹೊಡೆದು 12 ಮಂದಿ ಸಾವು, 23 ಜನರಿಗೆ ಗಾಯಅಪಘಾತ

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ಮುಂಜಾನೆ ವೇಗವಾಗಿ ಬಂದ ಮಿನಿ ಬಸ್ ಕಂಟೈನರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು 23 ಜನರು ಗಾಯಗೊಂಡಿದ್ದಾರೆ. ಖಾಸಗಿ ಬಸ್‌ನಲ್ಲಿ 35 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈನಿಂದ ಸುಮಾರು 350 ಕಿಮೀ ದೂರದಲ್ಲಿರುವ ಜಿಲ್ಲೆಯ ಎಕ್ಸ್‌ಪ್ರೆಸ್‌ವೇಯ ವೈಜಾಪುರ ಪ್ರದೇಶದಲ್ಲಿ ಮಧ್ಯರಾತ್ರಿ 12.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದರು.

ಬಸ್ ಚಾಲಕ ಚಕ್ರಗಳ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಾನೆ. ಇದರಿಂದ ಕಂಟೇನರ್‌ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹನ್ನೆರಡು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಐವರು ಪುರುಷರು, ಆರು ಮಹಿಳೆಯರು ಮತ್ತು ಓರ್ವ ಅಪ್ರಾಪ್ತ ಬಾಲಕಿ ಸೇರಿದ್ದಾರೆ ಎಂದು ಅವರು ತಿಳಿಸಿದ್ದಾರೆ.

23 ಮಂದಿ ಗಾಯಗೊಂಡಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

No comments

Powered by Blogger.