ಅ.30ರಿಂದ ರಾಜ್ಯಾದ್ಯಂತ ದತ್ತಮಾಲೆ ಅಭಿಯಾನ; 7 ಪ್ರಮುಖ ಬೇಡಿಕೆ ಮುಂದಿಟ್ಟ ಶ್ರೀರಾಮಸೇನೆ
ಅ.30ರಿಂದ ರಾಜ್ಯಾದ್ಯಂತ ದತ್ತಮಾಲೆ ಅಭಿಯಾನ; 7 ಪ್ರಮುಖ ಬೇಡಿಕೆ ಮುಂದಿಟ್ಟ ಶ್ರೀರಾಮಸೇನೆ
ಚಿಕ್ಕಮಗಳೂರು ಅ.09: ಕಳೆದ ವರ್ಷದಂತೆ ಈ ವರ್ಷವೂ ಶ್ರೀರಾಮಸೇನೆ ದತ್ತಮಾಲೆ ಅಭಿಯಾನ ನಡೆಸಲು ನಿರ್ಧರಿಸಿದೆ. ಅಕ್ಟೋಬರ್ 30 ರಿಂದ ರಾಜ್ಯಾದ್ಯಂತ ಏಳು ದಿನಗಳ ಕಾಲ ದತ್ತಮಾಲೆ ಅಭಿಯಾನ ನಡೆಯಲಿದೆ. ದತ್ತಮಾಲೆ ಅಭಿಯಾನದ ಮೂಲಕ ಏಳು ಪ್ರಮುಖ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಡಲು ನಿರ್ಧರಿಸಿದೆ.
ನವೆಂಬರ್ 5 ರಂದು ಶ್ರೀರಾಮಸೇನೆ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪವರ್ತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠ ಆಗಮಿಸಲಿದ್ದಾರೆ. ಅಂದು ದತ್ತಪೀಠದಲ್ಲಿ ಹೋಮ, ದತ್ತ ಪಾದುಕೆ ದರ್ಶನ ನಡೆಯಲಿದೆ.
ದತ್ತಮಾಲೆ ಅಭಿಮಾಯನದ ಮೂಲಕ ಶ್ರೀರಾಮಸೇನೆ ಕಾರ್ಯಕರ್ತರು ಸರ್ಕಾರಕ್ಕೆ ಏಳು ಬೇಡಿಕೆಗಳನ್ನು ಸಲ್ಲಿಸಲಿದ್ದಾರೆ. “ಕಾಣೆಯಾದ ಅಮೂಲ್ಯ ವಿಗ್ರಹಗಳ ಬಗ್ಗೆ ತನಿಖೆ ನಡೆಸಬೇಕು. ದತ್ತಪೀಠದಲ್ಲಿ ಇಸ್ಲಾಂ ಚಟುವಟಿಕೆಗೆ ಅವಕಾಶ ನೀಡಬಾರದು. ದತ್ತಪೀಠದಲ್ಲಿ ದತ್ತಾತ್ರೇಯ ವಿಗ್ರಹ ಪ್ರತಿಷ್ಠಾಪನೆ ಮಾಡಲು ಅನುಮತಿ ನೀಡಬೇಕು. ಉರ್ದು ನಾಮಫಲಕವನ್ನ ತೆಗೆಯಬೇಕು. ದತ್ತಪೀಠದಲ್ಲಿರುವ ಗೋರಿಗಳ ಸ್ಥಳಾಂತರಿಸಬೇಕು” ಎಂದು ಆಗ್ರಹಿಸಲಿದ್ದಾರೆ.
Post a Comment