ಹಾಲಶ್ರೀ ಸ್ವಾಮೀಜಿಯ ಮತ್ತೊಂದು ಬಿಜೆಪಿ ಟಿಕೆಟ್‌ ಹಗರಣ ಬಯಲಿಗೆ: ಮಹತ್ವದ ಸಾಕ್ಷ್ಯ ಕಲೆಹಾಕಿದ ಪೊಲೀಸ್ರು


ಹಾಲಶ್ರೀ ಸ್ವಾಮೀಜಿಯ ಮತ್ತೊಂದು ಬಿಜೆಪಿ ಟಿಕೆಟ್‌ ಹಗರಣ ಬಯಲಿಗೆ: ಮಹತ್ವದ ಸಾಕ್ಷ್ಯ ಕಲೆಹಾಕಿದ ಪೊಲೀಸ್ರು


ಗದಗ, (ಅ. 5): ವಿಧಾನಸಭೆ ಚುನಾವಣೆಯಲ್ಲಿ  ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ರೂ. ವಂಚನೆ ಮಾಡಿದ ಪ್ರಕರಣ ರಾಜ್ಯದಲ್ಲಿ ಭಾರಿ ಸುದ್ದಿ ಮಾಡಿದೆ. ಉಡುಪಿ ಮೂಲದ ಉದ್ಯಮಿಗೆ ವಂಚನೆ ಬೆನ್ನಲ್ಲೇ ಗದಗ ಜಿಲ್ಲೆಯಲ್ಲೂ ಅಭಿನವ ಹಾಲಶ್ರೀ ವಿರುದ್ಧ ವಂಚನೆ ಕೇಸ್ ದಾಖಲಾಗಿತ್ತು. ಈಗ ಬೆಂಗಳೂರಿನ ಜೈಲಿನಲ್ಲಿದ್ದ ಹಾಲಶ್ರೀ ಸ್ವಾಮೀಯನ್ನು ಮುಂಡರಗಿ ಪೊಲೀಸ್ರು ಬಾಡಿ ವಾರಂಟ್ ಮೇಲೆ ಆಚೆ ಕರೆದುಕೊಂಡು ಬಂದು ಎಲ್ಲೆಡೆ ಸ್ಥಳ ಮಹಜರು ಮಾಡಿದ್ದಾರೆ.


ಗದಗ ಜಿಲ್ಲೆಯ ಶಿರಹಟ್ಟಿ ಮತಕ್ಷೇತ್ರ ಶಾಸಕ ಆಗಬೇಕು ಎಂದು ಟಿಕೆಟ್‌ಗಾಗಿ ಪೈಪೊಟಿ ನಡೆಸುತ್ತಿದ್ದ ಸಂಜಯ್ ಚವಡಾಳಗೆ ಹಾಲಶ್ರೀ ಸ್ವಾಮೀ ಟಿಕೆಟ್ ಕೊಡಿಸೋದಾಗಿ ಒಂದು ಕೋಟಿ ರೂ. ಪಡೆದಿದ್ದರಂತೆ. ಹೀಗಾಗಿ ಸಂಜಯ್ ಚವಡಾಳ ಸೆಪ್ಟೆಂಬರ್ 25ರಂದು ಮುಂಡರಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ರು.. ಆ ಪ್ರಕರಣ ಸಂಬಂಧ ಹಾಲಶ್ರೀ ಸ್ವಾಮೀಜಿಯ ವಿಚಾರಣೆ ಮಾಡಲಾಗ್ತಿದೆ. ನಿನ್ನೆ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯ ಹಾಲಶ್ರೀ ಮಠಕ್ಕೆ ಕರೆದುಕೊಂಡು ಹೋಗಿ ಮಹಜರು ಮಾಡಲಾಗಿದೆ. ಮುಂಡರಗಿ ಪಟ್ಟಣದ ಹಣಕಾಸಿನ ವ್ಯವಹಾರ ನಡೆದ ವಿವಿಧ ಸ್ಥಳಗಳಲ್ಲೂ ಸ್ಥಳ ಮಹಜರು ಮಾಡಲಾಗಿದೆ.


ಹಾಲಶ್ರೀ ಹಣ ಪಡೆದಿರುವ ಸಾಕ್ಷ್ಯಗಳು ಸಾಬೀತಾಗಿವೆ ಎನ್ನಲಾಗಿದ್ದು, ಸಂಪೂರ್ಣ ತನಿಖೆಯಿಂದ ಸತ್ಯ ಹೊರಗಡೆ ಬರಬೇಕಾಗಿದೆ.

No comments

Powered by Blogger.