ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆದ್ದ ಪಾರುಲ್ ಚೌಧರಿ
ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆದ್ದ ಪಾರುಲ್ ಚೌಧರಿ
ಭಾರತದ ಪಾರುಲ್ ಚೌಧರಿ ಏಷ್ಯನ್ ಗೇಮ್ಸ್ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಮಂಗಳವಾರ ನಡೆದ 5000 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಪಾರುಲ್ ಭಾರತದ ಕೀರ್ತಿ ಪಾತಾಕೆಯನ್ನು ಹಾರಿಸಿದ್ದಾರೆ. ಇದರೊಂದಿಗೆ ಈ ಬಾರಿಯ ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೂರನೇ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಆಗಿದ್ದಾರೆ.
ವಿಶೇಷ ಎಂದರೆ ಪಾರುಲ್ 3000 ಮೀಟರ್ ಓಟದಲ್ಲಿ ಭಾರತಕ್ಕೆ ಬೆಳ್ಳಿ ಪದಕವನ್ನು ಗೆದ್ದಿದ್ದರು. ಇದೀಗ 5000 ಮೀಟರ್ ರೇಸ್ನಲ್ಲಿ ಚಿನ್ನದ ಪದಕಕ್ಕೆ ಕೊರೊಳೊಡ್ಡುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬಾರಿಯ ಏಷ್ಯನ್ ಗೇಮ್ಸ್‌ನ ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ ಇದು ಭಾರತದ ಮೂರನೇ ಸ್ವರ್ಣ ಪದಕ. ಇದಕ್ಕೂ ಮುನ್ನ ಶಾಟ್‌ಪುಟ್ ಆಟಗಾರ ತಜಿಂದರ್‌ಪಾಲ್ ಸಿಂಗ್ ತೂರ್ ಮತ್ತು ಪುರುಷರ 3000 ಮೀಟರ್ ಸ್ಟೀಪಲ್‌ಚೇಸ್ ವಿಜೇತ ಅವಿನಾಶ್ ಸಬ್ಲೆ ಚಿನ್ನದ ಪದಕಗಳನ್ನು ಗೆದ್ದಿದ್ದರು.
ಆದರೆ ಏಷ್ಯನ್ ಗೇಮ್ಸ್ ಮೂಲಕ ಪಾರುಲ್ಗೆ ತಮ್ಮ ದಾಖಲೆಯನ್ನು ಮುರಿಯಲು ಸಾಧ್ಯವಾಗಿಲ್ಲ. ಅಂದರೆ ಈ ವರ್ಷದ ಆಗಸ್ಟ್‌ನಲ್ಲಿ ಬುಡಾಪೆಸ್ಟ್‌ನಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಅವರು 9 ನಿಮಿಷ 15.31 ಸೆಕೆಂಡುಗಳಲ್ಲಿ ಗುರಿ ಮುಟ್ಟುವ ಮೂಲಕ ರಾಷ್ಟ್ರೀಯ ದಾಖಲೆಯನ್ನು ನಿರ್ಮಿಸಿದ್ದರು. ಅಲ್ಲದೆ ಪ್ಯಾರಿಸ್ ಒಲಿಂಪಿಕ್ಸ್ 2024 ಗೆ ಅರ್ಹತೆ ಪಡೆದಿದ್ದರು.
Post a Comment