ಶಿವಮೊಗ್ಗದಲ್ಲಿ ಈದ್ ಮಿಲಾದ್ ಗಲಾಟೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹ ಹರಡುವವರ ವಿರುದ್ಧ ಕಠಿಣ ಕ್ರಮ;
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗಲಾಟೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹ ಹರಡುವವರ ವಿರುದ್ಧ ಕಠಿಣ ಕ್ರಮ;
ಶಿವಮೊಗ್ಗ, ಅ.03: ಈದ್-ಮಿಲಾದ್ ಹಬ್ಬದಲ್ಲಿ ಆದ ಗಲಾಟೆಯ ಕುರಿತು ನಿನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಊಹಾಪೋಹಗಳು ಹಬ್ಬುತ್ತಿವೆ. ಬೇರೆ ಬೇರೆ ರಾಜ್ಯದ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ. ಈ ರೀತಿ ಊಹಾಪೋಹಗಳನ್ನ ಹರಿಬಿಡುತ್ತಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಜೊತೆಗೆ ಈ ಕುರಿತು ಸಾರ್ವಜನಿಕರು ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ ಎಂದು ಶಿವಮೊಗ್ಗ ಎಸ್ಪಿ.ಮಿಥುನ್ ಕುಮಾರ ಹೇಳಿದರು.
ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹ ಹರಡುವವರ ವಿರುದ್ಧ ಕಠಿಣ ಕ್ರಮ
ಹೌದು, ಈದ್-ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ಶಿವಮೊಗ್ಗ ನಗರದ ರಾಗಿಗುಡ್ಡ ಶಾಂತಿ ನಗರದಲ್ಲಿ ಕಲ್ಲು ತೂರಾಟ ನಡೆಸಲಾಗಿತ್ತು. ಈ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ‘ಅಂದಿನ ದಿನ ರಾಗಿಗುಡ್ಡದಲ್ಲಿ ಯಾರೋ ಒಬ್ಬರ ಎನ್ ಕೌಂಟರ್ ಆಗಿದೆ ಎನ್ನುವ ಊಹಾಪೋಹ ಹರಿದಾಡಿದೆ. ಆ ರೀತಿ ಊಹಾಪೋಹಗಳ ಕುರಿತು ಈಗಾಗಲೇ ನಾವು ಸ್ಪಷ್ಟನೆಯನ್ನ ಪಡೆದುಕೊಂಡಿದ್ದೇವೆ. ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನು ಈಗಾಗಲೇ ಕಲ್ಲು ತೂರಾಟದಿಂದ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
Post a Comment