ಹಳಿ ತಪ್ಪಿದ ರೀ ರೈಲ್: ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯನಮ್ಮ ಮೆಟ್ರೋ
ಹಳಿ ತಪ್ಪಿದ ರೀ ರೈಲ್: ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯ
ನಮ್ಮ ಮೆಟ್ರೋ
ಬೆಂಗಳೂರು, ಅ.3.ರೀ ರೈಲ್ ಹಳಿತಪ್ಪಿದ ಹಿನ್ನೆಲೆಯಲ್ಲಿ ಇಂದು ಅಕ್ಟೋಬರ್ 3 ,ಬೆಳಗ್ಗೆಯಿಂದ ಹಸಿರು ಮಾರ್ಗದ ಬೆಂಗಳೂರು, ನಮ್ಮ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯವಾಗಿದೆ. ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಅದನ್ನು ಸರಿಪಡಿಸಲು ಬಳಸುವ ರೀ ರೈಲ್ ವಾಹನವೇ ಹಳಿತಪ್ಪಿದೆ. ರಾಜಾಜಿನಗರ ಮೆಟ್ರೋ ನಿಲ್ದಾಣ ಸಮೀಪದ ಕರ್ವ್ ನಲ್ಲಿ ಈ ಘಟನೆ ನಡೆದಿದೆ. ಹೀಗಾಗಿ ಗ್ರೀನ್ ಲೈನ್ನಲ್ಲಿ ನಮ್ಮ ಮೆಟ್ರೋ ಏಕಮುಖವಾಗಿ ಮಾತ್ರ ಸಂಚರಿಸುತ್ತಿವೆ. ಇದೆರಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ.
ರೀ ರೈಲ್ ಟ್ರ್ಯಾಕ್ ತಪ್ಪಿದ್ದರಿಂದ ಶ್ರೀರಾಮಂಪುರ, ಕುವೆಂಪು, ರಾಜಾಜಿನಗರ, ಮಹಾಲಕ್ಷ್ಮೀ, ಸ್ಯಾಂಡಲ್ ಸೋಪ್ ಫ್ಯಾಕ್ಟರಿ ನಡುವೆ ಮೆಟ್ರೋ ಸೇವೆ ಸಂಚಾರ ಇರುವುದಿಲ್ಲ, ಇನ್ನುಳಿಂದತೆ ಸದ್ಯ ನಾಗಸಂದ್ರದಿಂದ ಯಶವಂತಪುರ ಮತ್ತು ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆಯಿಂದ ರೇಷ್ಮೆ ಸಂಸ್ಥೆ ಮೆಟ್ರೊ ನಿಲ್ದಾಣದ ನಡುವೆ ಮಾತ್ರ ರೈಲು ಸೇವೆಗಳು ಲಭ್ಯವಿರುತ್ತವೆ. ಹೀಗಾಗಿ ಮೆಟ್ರೋ ಪ್ರಯಾಣಿಕರು ಸಹಕರಿಸುವಂತೆ ಬಿಎಂಆರ್ಸಿಎಲ್ ಮನವಿ ಮಾಡಿದೆ.
ರೀ ರೈಲ್ ವಾಹನವನ್ನು ಹಳಿಗೆ ತರಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಇಂದು ಮಧ್ಯಾಹ್ನದವರೆಗೂ ಪ್ರಯಾಣಿಕರಿಗೆ ತೊಂದರೆಯಾಗಲಿದೆ. ಹೀಗಾಗಿ ಪ್ರಯಾಣಿಕರಿಗೆ ಭಾರೀ ಅನಾನುಕೂಲ ಉಂಟಾಗಲಿದೆ.
Post a Comment