ಚೀನಾದಿಂದ ದೇಣಿಗೆ ಸಂಗ್ರಹ : ನ್ಯೂಸ್‌ಕ್ಲಿಕ್‌ನ ಪತ್ರಕರ್ತರ ಮನೆ ಮೇಲೆ ದಾಳಿ


ಚೀನಾದಿಂದ ದೇಣಿಗೆ ಸಂಗ್ರಹ : ನ್ಯೂಸ್‌ಕ್ಲಿಕ್‌ನ ಪತ್ರಕರ್ತರ ಮನೆ ಮೇಲೆ ದಾಳಿ

ನ್ಯೂಸ್‌ಕ್ಲಿಕ್ ಡಿಜಿಟಲ್‌ ಮಾಧ್ಯಮ ಸಂಸ್ಥೆಯ ಪತ್ರಕರ್ತರ ಮೇಲೆ ಚೀನಾದಿಂದ ಹಣ ಹೂಡಿಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ನ್ಯೂಸ್‌ಕ್ಲಿಕ್‌ನ 30ಕ್ಕೂ ಅಧಿಕ ಪತ್ರಕರ್ತರ ನಿವಾಸಗಳ ಮೇಲೆ ದೆಹಲಿ ಪೊಲೀಸ್‌ ಸ್ಪೆಷಲ್‌ ಸೆಲ್‌ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.


ಹಾಗೆಯೇ, ನ್ಯೂಸ್‌ಕ್ಲಿಕ್‌ ವಿರುದ್ಧ ಕಾನೂನಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಚೀನಾದಿಂದ ಹಣ ಹೂಡಿಕೆಗೆ ಸಂಬಂಧಿಸಿದಂತೆ ಈಗಾಗಲೇ ಜಾರಿ ನಿರ್ದೇಶನಾಲಯವು ನ್ಯೂಸ್‌ಕ್ಲಿಕ್‌ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದೆ.


ನ್ಯೂಸ್‌ಕ್ಲಿಕ್‌ನಲ್ಲಿ ಚೀನಾ ಹೂಡಿಕೆ ಕುರಿತು ಕಳೆದ ಆಗಸ್ಟ್‌ನಲ್ಲಿ ಅಮೆರಿಕದ ನ್ಯೂಯಾರ್ಕ್‌ ಟೈಮ್ಸ್‌ ವರದಿ ಮಾಡಿತ್ತು. ಚೀನಾದ ಪರವಾಗಿ ನಿಲುವು ಹೊಂದಿರುವ, ಚೀನಾ ನಿರ್ಧಾರಗಳನ್ನು ಬೆಂಬಲಿಸುವ ಅಮೆರಿಕದ ಉದ್ಯಮಿ ನೆವಿಲ್ಲೆ ರಾಯ್‌ ಸಿಂಘಂ ಎಂಬುವರು ಹಲವು ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದು, ಇವುಗಳಲ್ಲಿ ನ್ಯೂಸ್‌ಕ್ಲಿಕ್‌ ಕೂಡ ಇದೆ” ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಿತ್ತು.

No comments

Powered by Blogger.