ಮುಂಬೈ ಬಂಟರ ಭವನದಲ್ಲಿ "ವಿಶ್ವ ಬಂಟರ ಸಮ್ಮೇಳನದ ಆಮಂತ್ರಣ ಪತ್ರಿಕೆ" ಬಿಡುಗಡೆ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ದಿನಾಂಕ ಅ 28 ರಂದು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ದಿನಪೂರ್ತಿ ಜರಗಲಿರುವ "ವಿಶ್ವ ಬಂಟರ ಕ್ರೀಡಾಕೂಟ" ಹಾಗೂ ಅ 29 ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ವಠಾರದಲ್ಲಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ "ವಿಶ್ವ ಬಂಟರ ಸಾಂಸ್ಕೃತಿಕ ವೈಭವ" ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅ 7/10/2023ರಂದು ಬಂಟರ ಸಂಘ ಮುಂಬೈಯಲ್ಲಿ ಬಂಟರ ಸಂಘ ಮುಂಬೈಯ ಅಧ್ಯಕ್ಷರಾದ ಶ್ರೀ ಚಂದ್ರಹಾಸ್ ಶೆಟ್ಟಿ, ಒಕ್ಕೂಟದ ಮಹಾ ದಾನಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಮತ್ತು ಒಕ್ಕೂಟದ ಮಹಾ ನಿರ್ದೇಶಕರಾದ ಶ್ರೀ ಕೆ. ಪ್ರಕಾಶ್ ಶೆಟ್ಟಿಯವರಿಂದ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತುರು ಮೋಹನದಾಸ್ ಶೆಟ್ಟಿ, ನಿರ್ದೇಶಕರಾದ ಕೆ. ಎಮ್. ಶೆಟ್ಟಿ ಮತ್ತು ಡಾ. ಆರ್. ಕೆ. ಶೆಟ್ಟಿ, ಪೋಷಕ ಸದಸ್ಯರಾದ ಪದ್ಮನಾಭ ಪಯ್ಯಡೆ, ಶಾಂತರಾಮ್ ಬಿ. ಶೆಟ್ಟಿ, ಪೋಷಕರು ಹಾಗೂ ಕ್ರೀಡಾ ಸಮಿತಿಯ ಸಂಚಾಲಕರಾದ ಗಿರೀಶ್ ಶೆಟ್ಟಿ ತೆಳ್ಳರ್, ಬಿ. ಆರ್. ಶೆಟ್ಟಿ, ಸಿ. ಎ. ಐ. ಆರ್. ಶೆಟ್ಟಿ, ನಿತ್ಯಾನಂದ ಹೆಗ್ಡೆ ಮತ್ತು ಸಿ. ಎ. ಹರೀಶ್ ಶೆಟ್ಟಿ ಇವರುಗಳು ಉಪಸ್ಥಿತರಿದ್ದರು.

Post a Comment