ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ
ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ
ಶಿವಮೊಗ್ಗದ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಸ್ಥಳಕ್ಕೆ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ಭೇಟಿ ನೀಡಿ ಗುಂಪನ್ನು ಚದುರಿಸಿ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದ್ದಾರೆ.
ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ
ಶಿವಮೊಗ್ಗದಲ್ಲಿ
ವಮೊಗ್ಗ, ಅ.01: ಇಂದು ಶಿವಮೊಗ್ಗ(Shivamogga)ದಲ್ಲಿ ಈದ್ ಮಿಲಾದ್ (Eid Milad Un Nabi)ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅದರಂತೆ ನಗರದಲ್ಲಿ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಶಿವಮೊಗ್ಗದ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಸ್ಥಳಕ್ಕೆ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ಭೇಟಿ ನೀಡಿ ಗುಂಪನ್ನು ಚದುರಿಸಿ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಜಿ.ಕೆ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುನ್ನೆಚ್ಚರಿಕೆಯಿಂದ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ
ಇನ್ನು ಈದ್ ಮಿಲಾದ್ ಹಬ್ಬ ಆಚರಣೆ ವೇಳೆ ಕಲ್ಲೆಸೆತ ಉಂಟಾದ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಅವರು ಶಿವಮೊಗ್ಗದ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್ ಜಾರಿಗೆ ಆದೇಶಿಸಿದ್ದಾರೆ. ಜೊತೆಗೆ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿಪ್ರಹಾರ ನಡೆಸಿದ್ದು, ಈ ವೇಳೆ ಕಿಡಿಗೇಡಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇನ್ನು ಗಲಾಟೆಯಲ್ಲಿ ಸಿಲುಕಿದ್ದ 7 ಜನರನ್ನು ಪೊಲೀಸರು ರಕ್ಷಿಸಿದ್ದಾರೆ
Post a Comment