ಏಷ್ಯನ್ ಗೇಮ್ಸ್ನಲ್ಲಿ ಫೈನಲ್ಗೆ ಲಗ್ಗೆಯಿಟ್ಟ ಭಾರತ ಕ್ರಿಕೆಟ್ ತಂಡ: ಒಂದು ಪದಕ ಖಚಿತ.
ಏಷ್ಯನ್ ಗೇಮ್ಸ್ನಲ್ಲಿ ಫೈನಲ್ಗೆ ಲಗ್ಗೆಯಿಟ್ಟ ಭಾರತ ಕ್ರಿಕೆಟ್ ತಂಡ:
ಒಂದು ಪದಕ ಖಚಿತ.
ಏಷ್ಯನ್ ಗೇಮ್ಸ್ ಪುರುಷರ ಮೊದಲ ಟಿ20 ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಮಣಿಸಿ ಟೀಮ್ ಇಂಡಿಯಾ ಫೈನಲ್ ತಲುಪಿದೆ. ಬ್ಯಾಟಿಂಗ್ - ಬೌಲಿಂಗ್ನಲ್ಲಿ ಮಿಂಚಿದ ಭಾರತ 9 ವಿಕೆಟ್ಗಳ ಅಮೋಘ ಗೆಲುವು ಕಂಡಿತು. ಈ ಮೂಲಕ ಏಷ್ಯನ್ ಗೇಮ್ಸ್ನಲ್ಲಿ ಭಾರತ ಚಿನ್ನ ಅಥವಾ ಬೆಳ್ಳಿ ಪದಕವನ್ನು ಖಚಿತ ಪಡಿಸಿಕೊಂಡಿದೆ.
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಭಾರತ ಕ್ರಿಕೆಟ್ ತಂಡ ಫೈನಲ್ಗೆ ಪ್ರವೇಶ ಪಡೆದಿದೆ. ಇಂದು ಪಿಂಗ್ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್ನಲ್ಲಿ ನಡೆದ ಪುರುಷರ ಮೊದಲ ಟಿ20 ಸೆಮಿಫೈನಲ್ ಪಂದ್ಯದಲ್ಲಿ ಸೈಫ್ ಹಸನ್ ನೇತೃತ್ವದ ಬಾಂಗ್ಲಾದೇಶ ತಂಡವನ್ನು ಮಣಿಸಿ ಟೀಮ್ ಇಂಡಿಯಾ ಫೈನಲ್ ತಲುಪಿತು. ಬ್ಯಾಟಿಂಗ್ – ಬೌಲಿಂಗ್ನಲ್ಲಿ ಮಿಂಚಿದ ಭಾರತ 9 ವಿಕೆಟ್ಗಳ ಅಮೋಘ ಗೆಲುವು ಕಂಡಿತು. ಈ ಮೂಲಕ ಏಷ್ಯನ್ ಗೇಮ್ಸ್ನಲ್ಲಿ ಭಾರತ ಚಿನ್ನ ಅಥವಾ ಬೆಳ್ಳಿ ಪದಕವನ್ನು ಖಚಿತ ಪಡಿಸಿಕೊಂಡಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಬ್ಯಾಟಿಂಗ್ಗೆ ಇಳಿದ ಬಾಂಗ್ಲಾ 50 ರನ್ಗು ಮೊದಲೇ 5 ವಿಕೆಟ್ ಕಳೆದುಕೊಂಡಿತು. ಮೊಹಮ್ಮದುಲ್ ಹಸನ್ 5, ನಾಯಕ ಸೈಫ್ ಹಸನ್ 1 ರನ್ ಗಳಿಸಿದರೆ ಜಾಕಿರ್ ಹಸನ್ ಸೊನ್ನೆ ಸುತ್ತಿದರು. ಪರ್ವೇಜ್ ಹೊಸೈನ್ ಎಮನ್ 23 ರನ್ಗಳ ಕೊಡುಗೆ ನೀಡಿದರು. ಜೇಕರ್ ಅಲಿ 14 ರನ್ ಗಳಿಸಿದರು. ಉಳಿದ ಬ್ಯಾಟರ್ಗಳೆಲ್ಲ ಬಂದಷ್ಟೆ ವೇಗದಲ್ಲಿ ಪೆವಿಲಿಯನ್ ಸೇರಿಕೊಂಡರು. ಬಾಂಗ್ಲಾ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 96 ರನ್ಗಳಿಸಿತಷ್ಟೆ. ಭಾರತ ಪರ ಸಾಯಿ ಕಿಶೋರ್ 3 ವಿಕೆಟ್ ಕಿತ್ತರೆ, ವಾಷಿಂಗ್ಟನ್ ಸುಂದರ್ 2 ವಿಕೆಟ್ ಪಡೆದರು
Post a Comment