ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ: ಮುಖ್ಯ ಮಂತ್ರಿ ಸಿದ್ದರಾಮಯ್ಯ.

ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ
ಮುಖ್ಯ ಮಂತ್ರಿ ಸಿದ್ದರಾಮಯ್ಯ.
 ಬೆಂಗಳೂರು, ಅಕ್ಟೋಬರ್ 13: ಮಳೆ ಕಡಿಮೆ ಆಗಿರುವುದರಿಂದ  ಹಾಗೂ ಬೇಸಿಗೆ ರೀತಿಯಲ್ಲಿ ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.

 ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

 ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ.  ಕಳೆದ ವರ್ಷ ಇದೇ ವೇಳೆಗೆ 900 ಮೆಗಾವ್ಯಾಟ್ ಬಳಸಲಾಗುತ್ತಿತ್ತು. ಈ ಬಾರಿ 1500 ರಿಂದ 1600 ಮೆ.ವ್ಯಾಟ್ ಬೇಡಿಕೆ ಇರುವುದರಿಂದ  ತೊಂದರೆಯಾಗಿದೆ. ವಿದ್ಯುತ್ ನ್ನು ಹೊರಗಿನಿಂದ ಹೇಗೆ ಖರೀದಿಸುವುದು ಎಂದು ಚರ್ಚಿಸಲು ಇಂದು  ಮಧ್ಯಾಹ್ನ ಸಭೆ ಕರೆಯಲಾಗಿದೆ ಎಂದರು.


ವಿದ್ಯುತ್ ಉತ್ಪಾದನೆ ಮಾಡುವವರು ಸರ್ಕಾರಕ್ಕೆ ಮಾರಾಟ ಮಾಡಬೇಕು, ಬೇರೆಲ್ಲಿಯೂ ಮಾರಬಾರದೆಂದು  ನಿನ್ನೆ ಅದೇಶವನ್ನೂ ಮಾಡಲಾಗಿದೆ ಎಂದು ತಿಳಿಸಿದರು.


ಬಿಜೆಪಿಗೆ ವಸ್ತುಸ್ಥಿತಿ  ತಿಳಿದಿಲ್ಲ

ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿಯವರು ಹೇಳಿದ್ದಕ್ಕೆಲ್ಲಾ ಉತ್ತರ ನೀಡಲು ಆಗುವುದಿಲ್ಲ. ಅವರು ರಾಜಕೀಯವಾಗಿ ಮಾತನಾಡುತ್ತಾರೆ. ವಸ್ತುಸ್ಥಿತಿ ಅವರಿಗೆ ತಿಳಿದಿದೆಯೇ. ಮಳೆ ಇಲ್ಲದೆ ಬರಗಾಲ ಬಂದು ತೊಂದರೆಯಾಗಿದೆ.   ಆದರೂ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಅವರು ಹೇಳಿದಂತೆ ಸಂಪೂರ್ಣ ಲೋಡ್ ಶೆಡ್ಡಿಂಗ್ ಆಗಿಲ್ಲ. ಮೂರು ಫೇಸ್ ನಲ್ಲಿ 7 ಗಂಟೆ ವಿದ್ಯುತ್ ನೀಡಬೇಕೆಂದಿರುವುದನ್ನು ಕೊಡಲು  ಆಗುತ್ತಿಲ್ಲ ಎಂಬ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

No comments

Powered by Blogger.