ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಸಹಾಯವಾಣಿ ಬಿಡುಗಡೆ ಮಾಡಿದ ಕರ್ನಾಟಕ.

ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಸಹಾಯವಾಣಿ ಬಿಡುಗಡೆ ಮಾಡಿದ  ಕರ್ನಾಟಕ.

ಬೆಂಗಳೂರು, (ಅಕ್ಟೋಬರ್ 08):  ರಷ್ಯಾ ಮತ್ತು ಉಕ್ರೇನ್ ಯುದ್ಧದ ಮಧ್ಯೆಯೇ ಮತ್ತೆರಡು ರಾಷ್ಟ್ರಗಳು ಕಾಳಗ ನಿಂತಿವೆ. ಬದ್ಧವೈರಿ ಇಸ್ರೇಲ್ ವಿರುದ್ಧ ಹಮಾಸ್ ಬಂಡುಕೋರರು ಮತ್ತೆ ಯುದ್ಧ ಸಾರಿಸಿದ್ದಾರೆ.


 ಪ್ಯಾಲೆಸ್ತೀನ್​ನ ಹಮಾಸ್​​ ಬಂಡುಕೋರರು ದಿಢೀರ್​​ ದಾಳಿ ನಡೆಸಿದ್ದು, ಈ ಯುದ್ಧದಲ್ಲಿ ಇದುವರೆಗೆ 300 ಇಸ್ರೇಲಿಯನ್ನರು ಸಾವನ್ನಪ್ಪಿದ್ದಾರೆ. ಮತ್ತು 1750 ಜನರು ಗಾಯಗೊಂಡಿದ್ದಾರೆ. ಇದಕ್ಕೆ ಇಸ್ರೇಲ್​ ಸಹ ಪ್ರತ್ಯುತ್ತರ ನೀಡಲು ಯುದ್ಧ ಘೋಷಿಸಿದೆ. ಇದರಿಂದ ಪರಿಸ್ಥಿತಿ ಬಿಗಡಾಯಿಸಿದೆ. ಈ ನಡುವೆ ಇಸ್ರೇಲ್‌ನಲ್ಲಿ ಸಾವಿರಾರು ಭಾರತೀಯರು ನೆಲೆಸಿದ್ದು, ಅದರಲ್ಲೂ ಕನ್ನಡಿಗರು ಸಹ ಇದ್ದಾರೆ. ಸಂಕಷ್ಟಕ್ಕೆ ಸಿಲುಕಿರುವ ಜನರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಅದಕ್ಕಾಗಿಯೇ ಸಹಾಯವಾಣಿ ಸಂಖ್ಯೆ  (Help Line) ಬಿಡುಗಡೆ ಮಾಡಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಪ್ರಸ್ತುತ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಇಸ್ರೇಲ್‌ನಲ್ಲಿ ನಲೆಸಿರುವ ಎಲ್ಲ ಭಾರತೀಯರು ಸುರಕ್ಷಾ ಮತ್ತು ಜಾಗರೂಕರಾಗಿರುವಂತೆ ತಿಳಿಸಿದ್ದಾರೆ. ಜನನಿಬಿಡ ಪ್ರದೇಶಗಳ ಮೇಲೆ ರಾಕೆಟ್ ದಾಳಿ ಮುಂದುವರಿದಿದ್ದು, ಇನ್ನೊಂದೆಡೆ ಇಸ್ರೇಲ್ ಪ್ರವೇಶಿಸಿರುವ ಹಮಾಸ್ ಉಗ್ರರು ಇಸ್ರೇಲಿ ಪ್ರಜೆಗಳನ್ನು ಅಪಹರಿಸುತ್ತಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆ ಮನೆಯಿಂದ ಆಚೆ ಬರದಂತೆ ಸೂಚಿಸಲಾಗಿದೆ. ದೇಶದ ಜನರು ಅದರಲ್ಲೂ ಕನ್ನಡಿಗರು ಸಹ ಸ್ಥಳೀಯ ಅಧಿಕಾರಿಗಳ ಸೂಚನೆ ಮತ್ತು ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ವಿನಂತಿಸಿಕೊಂಡಿದ್ದಾರೆ.

No comments

Powered by Blogger.